ರಾಮ ಶ್ರೀ ರಘುನಂದನ ಶರಣು helavanakatte giriyamma rama sri raghunandana sharanu
Restart mobile & try if the above audio is not playing
ಹೆಳವನಕಟ್ಟೆ ಗಿರಿಯಮ್ಮನವರ ಕೃತಿ
ರಾಗ :ಅಭೇರಿ ತಾಳ : ಆದಿ
ರಾಮ ಶ್ರೀ ರಘುನಂದನ ಶರಣು ಸಾರ್ವ-
ಭೌಮ ಭೂಸುರವಂದ್ಯನು ॥ಪ॥
ಸೋಮಶೇಖರಮಿತ್ರ ಕಾಮಿತ ಫಲದಾತ್ರ
ಕಾಮಧೇನು ವಿಶ್ವಭೀಮ ಸನ್ನುತ ಸೀತಾ ॥ಅ.ಪ॥
ಕ್ರೂರ ದಾನವ ಸಂಹಾರ ಕೌಸಲ್ಯಾಕುಮಾರ ಭೂ-
ಭಾರಹರ ಭಜಕಜನೋದ್ಧಾರ ವೇದಾಂತಸಾರ
ಚಾರುವದನ ಮಣಿಹಾರ ಕುಂಡಲಧರ
ವೀರರಾಘವ ವಿಶ್ವಾಧಾರ ಕರುಣಿಸು ಸೀತಾ ॥೧॥
ಪಾಪರಹಿತ ಪಾವನ ಚರಿತ ಅಹಲ್ಯಾ
ಶಾಪ ಹರಣ ದಿವ್ಯರೂಪ ರಮಾರಮಣ
ತಾಪ ವಿಚ್ಛೇದನ ತಾಮಸ ಗುಣಹರಣ ದ-
ಯಾಪರ ಬ್ರಹ್ಮಸ್ವರೂಪ ಮೂರುತಿ ಸೀತಾ॥೨॥
ಮದನಕೋಟಿ ಮೋಹನಾಂಗ ಮಾಧವ ಪುಣ್ಯಚರಿತ
ಕರುಣಾಪಾಂಗ ಹೆಳವನಕಟ್ಟೆ ರಂಗಯ್ಯ
ಸದಾನಂದ ಸುಮತೀಂದ್ರ ಹೃದಯ ಪಂಕಜಭೃಂಗ
ಕದನ ವಿಕ್ರಮ ಬಾಹು ಕೋದಂಡಧೃತ ಸೀತಾ॥೩॥
**
.jpeg)
Comments
Post a Comment