ಕಿಂಕರನ ಧ್ವನಿಗೆ ಕೊಡು ಮತಿಯನು vijaya dasaru kinkarana dhwanige kodu matiyanu

Restart mobile & try if the above audio is not playing

ಶ್ರೀವಿಜಯದಾಸರ ಕೃತಿ

ರಾಗ :ಸರಸ್ವತಿ   ಆದಿತಾಳ


ಕಿಂಕರನ ಧ್ವನಿಗೆ ಕೊಡು ಮತಿಯನು||pa||


ಪಂಕಜಾನಾಭನ ಸೊಸೆ ಸರಸ್ವತಿಯೆ ||a.pa||


ಸಕಲ ವಿದ್ಯಾರಂಭೆ ಕನಕ ಪುತ್ಥಳಿ ಬೊಂಬೆ

ವಿಕಸಿತ ಸುಲಲಿತಾಂಬೆ ಸುನಿತಂಬೆ

ನಿಕುರುಂಬೆ ಸುರರಂಭೆ ದಂತ ದಾಳಿಂಬೆ

ಭಕುತಿಯಲಿ ಕಾಂಬೆ ನಿನ್ನ ನಾಮವನುಂಬೆ||1||


ಗಂಗೆ ಯಮುನೆ ಉಭಯ ಸಂಗಮೆ ಭಕ್ತ ಭಯ

ಹಿಂಗಿಸಿ ಕೊಡು ಅಭಯ ಅಖಿಳ ಧ್ಯೇಯೆ

ಮಂಗಳ ಶೋಭನ ಮಣಿಯೆ ಅಭ್ಯುದಯೆ ಅತಿ ಸದಯೆ

ರಂಗು ಮಾಣಿಕ ಪ್ರಭೆಯೆ ಸುಜನಾಬ್ಧಿಗೇಯೆ||2||


ಪ್ರಯಾಗ ವರಕ್ಷೇತ್ರವಾಸೆ ಪುಣ್ಯಕ್ಷೇತ್ರೆ

ಕ್ಷಯ ರಹಿತ ಮುನಿಸ್ತೋತ್ರೆ ಶುಭಚರಿತ್ರೆ

ನಯವಿನಯ ನೇತ್ರೆ ಪವಿತ್ರ ಅಜನ ಕಳತ್ರೆ

ಜಯಜಯೆ ಸಿರಿ ವಿಜಯವಿಠ್ಠಲನ ಪೌತ್ರೆ ||3||

8

**


Comments