ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ kanaka dasaru indu sairisiri srikrishnana tappa
Restart mobile & try if the above audio is not playing
ಶ್ರೀಕನಕದಾಸರ ಕೃತ
ರಾಗ : ಶಂಕರಾಭರಣ ಆದಿತಾಳ
ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ
ಮುಂದಕೆ ನಿಮ್ಮ ಮನೆಗೆ ಬಾರನಮ್ಮ||
ಮಗುವು ಬಲ್ಲುದೆ ಇಷ್ಟು ಬೆಣ್ಣೆಯ ಕದ್ದರೆ
ಬಿಗಿಯ ಬಹುದೇ ಶ್ರೀ ಚರಣವನು|
ಅಗಣಿತ ಮಹಿಮನ ಅಂಜಿಸಲೇಕಮ್ಮ
ಬಗೆಯ ಬಾರದೆ ನಿಮ್ಮ ಮಕ್ಕಳಂತೆ ||1||
ಹಸುಮಗುವನು ಕಂಡು ಮುದ್ದಿಸಲೊಲ್ಲದೆ
ಹುಸಿಗ ಕಳ್ಳನೆಂದು ಕಟ್ಟುವಿರಿ|
ವಸುಧೆಯೊಳಗೆ ನಾನೊಬ್ಬಳೆ ಪಡೆದೆನೆ
ನಿಮ್ಮಹಸು ಮಗುವಿನಂತೆ ಭಾವಿಸಬಾರದೆ ||2||
ಎಷ್ಟು ಸಾರಿಯು ನಾ ಬೇಡವೆಂದರೆ ಕೇಳ
ದುಷ್ಟ ಮಕ್ಕಳ ಕೂಡೆ ಒಡನಾಟವ|
ಕಟ್ಟಿದ ನೆಲುವಿನ ಬೆಣ್ಣೆಯನೀವೆನು
ಬಿಟ್ಟು ಕಳುಹಿರಮ್ಮ ಆದಿಕೇಶವನ ||3||
**
.jpeg)
Comments
Post a Comment