ನಾಟಕ ರಂಗದಲಿ ನಟಶಿರೋಮಣಿಯೊಬ್ಬ vidyaprasanna teertharu nataka rangadali nata shiromaniyobba



Restart mobile & try if the above audio is not playing


ಶ್ರೀ ಶ್ರೀ ವ್ಯಾಸರಾಜ ಮಠಾಧೀಶರಾದ ಶ್ರೀ ವಿದ್ಯಾ ಪ್ರಸನ್ನತೀರ್ಥ ಶ್ರೀಪಾದಂಗಳವರು ರಚಿಸಿರುವ ಸಂಕ್ಷಿಪ್ತ ಶ್ರೀನಿವಾಸ ಕಲ್ಯಾಣ .


ರಾಗ : ಆನಂದಭೈರವಿ


ನಾಟಕ ರಂಗದಲಿ ನಟಶಿರೋಮಣಿಯೊಬ್ಬ|

ಪಟುತನದಿ ವಿಧವಿಧದ ನಟನೆಗಳ ತೋರುವನು ||ಪ||


ಅಘಟನಾಘಟನ ಶಕ್ತನ ಕಪಟನಾಟಕವು|

ಘಟಕರಲ್ಲದ ಜನಕೆ ಎಟುಕದಾನೋಟ ||ಅ.ಪ||


ಮುಖ್ಯಪಾತ್ರವು ನಮ್ಮ ರುಕ್ಮಿಣಿ ರಮಣನದು |

ಮುಖ್ಯತಾರೆಯು ಲೋಕ ಜನನಿ ಲಕುಮಿ ||

ಇಕ್ಕಿದನು ಗೋರೂಪ ಚತುರಾನನನು ಮುದದಿ |

ಮುಖ್ಯಪ್ರಾಣನೆ ತುರಗ ಮುಕ್ಕಣ್ಣ ಕರುವಾದ ||1||


ಸುಖಸಾರನನು ಪಡೆದು ಧನ್ಯಳಾದ ಯಶೋದೆ|

ಬಕುಳೆಯೆ ತಾನಾದಳೀ ನಾಟಕದಲಿ||

ಅಕಳಂಕ ಮಹಿಮನನು ಅಗಲದಿದ್ದ ಸತಿಯು|

ಮುಖನೋಡಿ ಕೋಪದಲಿ ಕಲ್ಲುಗಳನೆಸೆದಳು ||2||


ಸರ್ವತ್ರ ವ್ಯಾಪ್ತನಿಗೆ ಇರಲು ಜಾಗವು ಸಿಗದೆ|

ಕಿರಿದ ತಾ ಹಲ್ಲುಗಳ ವರಹನಲ್ಲಿ||

ಹರನ ತಾತನು ತಾನು ಸ್ಮರನ ಬಾಣದಿ ನೊಂದ|

ಸುರಮೋಹಿನಿಯು ಇಂಥ ಕೊರವಂಜಿಯಾದಳು ||3||


ಹುಟ್ಟಿಸುವ ಬೊಮ್ಮನನು ಪುಟ್ಟ ಶಿಶುವನೆ ಮಾಡಿ|

ಹೊಟ್ಟೆಗಿಲ್ಲದೆ ಬಹಳ ಬಾಡಿ ಇರಲು||

ಮೃಷ್ಟಾನ್ನವನು ಚಿನ್ನ ತಟ್ಟೆಯಲಿ ತಂದಿಡಲು|

ಶ್ರೇಷ್ಠವಿದು ಜನನಿಗೆನ್ನುತ ತಿಂದು ತೇಗಿದಳು ||4||


ಬಡುಕನೆದೆಗೊದೆಯಲವನಡಿಗಳಿಗೆ ಶರಣೆಂದ|

ಕಡು ಕೋಪಿ ಗೋವಳನ ಕೊಡಲಿಗೊಡ್ಡಿದ ಶಿರವ||

ಹಿಡಿ ಮಣ್ಣು ಪಿಂಡಗಳನಿತ್ತ ಚಂಡಾಲನಿಗೆ|

ಸಡಗರದಿ ಲಕುಮಿಯನೇ ಕರದಲಿತ್ತ ಪ್ರಸನ್ನ ||5||

**

Comments