ನಿನಗೆ ಅಂಜುವನಲ್ಲ ನೀರಜಾಕ್ಷ vijaya dasaru
Restart mobile & try if the above audio is not playing
ಶ್ರೀ ಶ್ರೀ ವಿಜಯದಾಸರ ರಚನೆ
ರಾಗ : ಹಿಂದೊಳ ಖಂಡಛಾಪು
ನಿನಗೆ ಅಂಜುವನಲ್ಲ ನೀರಜಾಕ್ಷ |
ಮನವಚನ ಕಾಯದಿಂ ನಿನ್ನವರಿಗಂಜುವೆನು||
ರಾಗದಿಂದಲಿ ಇಂದ್ರದ್ಯುಮ್ನ ಭೂಪಾಲಕನು
ಯೋಗ ಮಾರ್ಗದಿ ನಿನ್ನ ಭಜಿಸುತಿರಲು|
ಯೋಗ ಕುಂಭೋದ್ಭವನು ಬಂದು ಶಾಪವ ಕೊಡಲು
ಆಗ ಮೌನದಲವನನೊಪ್ಪಿಸಿದ ಬಗೆ ಬಲ್ಲೆ ||
ಗುಣವಂತರೀರ್ವರು
ಜಯವಿಜಯರು ನಿನ್ನ
ಅನುಗಾಲ ಬಾಗಿಲನು ಕಾಯುತಿರಲು
ಸನಕಾದಿಗಳು ಬಂದು ಶಪಿಸಲಾಕ್ಷಣದಲ್ಲಿ|
ಸನುಮತದಲವರ ನೀನೊಪ್ಪಿಸಿದ ಬಗೆಬಲ್ಲೆ ||
ಉಣಲಿತ್ತರೆ ಉಂಡು ಪೋಗಲೊಲ್ಲದೆ ಒಂದು
ತೃಣದಲ್ಲಿ ಗೋವನ್ನೆ ರಚಿಸಿ ನಿಲಿಸಿ
ಮುನಿಪ ಗೌತಮನಿಗೆ ಗೋಹತ್ಯವನು ಹೊರಿಸಿ
ಕ್ಷಣದೊಳಗೆ ಅವನ ನೀನೊಪ್ಪಿಸಿದ ಬಗೆ ಬಲ್ಲೆ ||
ಅನಪರಾಧಿಗಳಿಗೆ ಇನಿತಾಯಿತೋ ದೇವ
ಎನಗೆ ತನಗೆಂಬುವರಿಗಾವ ಗತಿಯೊ
ಮಣಿದು ಬೇಡಿಕೊಂಬೆ ವಿಜಯವಿಠ್ಠಲರೇಯ•
ನಿನಗಿಂತ ಭಕುತಿ ನಿನ್ನವರಲ್ಲಿ ಕೊಡು ಎನಗೆ||
**

Comments
Post a Comment