ಇದನಾದರು ಕೊಡದಿದ್ದರೆ ನಿನ್ನ ಪದಕಮಲವ sripadarajaru
Restart mobile & try if the above audio is not playing
ಶ್ರೀ ಶ್ರೀಪಾದರಾಜರ ಕೃತಿ
ರಾಗ : ತಿಲ್ಲಂಗ್ ಅದಿತಾಳ
ಇದನಾದರು ಕೊಡದಿದ್ದರೆ ನಿನ್ನ
ಪದಕಮಲವ ನಂಬಿ ಭಜಿಸುವದೆಂತೊ ||ಪ||
ಗ್ರಾಸವಾಸಗಳಿಗೆ ಇಲ್ಲವೆಂದು ನಿನ್ನ
ಬೇಸರಿಸಿ ಬೇಡ ಬಂದುದಿಲ್ಲ
ವಾಸುದೇವನೆ ನಿನ್ನ ದಾಸರ ದಾಸರ
ದಾಸರ ದಾಸ್ಯವ ಕೊಡು ಸಾಕೆಂದರೆ ||1||
ಸತಿಸುತರುಗಳ ಸಹಿತನಾಗಿ ನಾ
ಹಿತದಿಂದ ಇರಬೇಕೆಂಬೊದಿಲ್ಲ
ಇತರ ವಿಷಯಂಗಳಿಗೆರಗಿಸದೆ ಮನಕೆ ನಿನ್ನ
ಕಥಾಮೃತವನೆ ಕೊಡು ಸಾಕೆಂದರೆ ||2||
ಆಗಬೇಕು ರಾಜ್ಯಭೋಗಗಳೆನಗೆಂದು
ಈಗ ನಾನು ಬೇಡಬಂದುದಿಲ್ಲ
ನಾಗಶಯನ ರಂಗವಿಠಲ ನಾ ನಿನ್ನ
ಬಾಗಿಲ ಕಾಯುವ ಭಾಗ್ಯ ಸಾಕೆಂದರೆ ||3||
***
Comments
Post a Comment